anjalyjayakrishnan's picture
kannada raw data
32165da
Book_Chapter_Verse,Text
COL_001_001,"ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,"
COL_001_002,"ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ."
COL_001_003,ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
COL_001_004,ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
COL_001_005,ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
COL_001_006,ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
COL_001_007,"ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ."
COL_001_008,ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.
COL_001_009,"ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,"
COL_001_010,"ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,"
COL_001_011,"ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,"
COL_001_012,ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
COL_001_013,ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
COL_001_014,ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
COL_001_015,"ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ."
COL_001_016,"ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು."
COL_001_017,"ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ."
COL_001_018,"ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ."
COL_001_019,"ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,"
COL_001_020,"ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು."
COL_001_021,ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
COL_001_022,"ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ."
COL_001_023,ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
COL_001_024,ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
COL_001_025,ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
COL_001_026,"ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ."
COL_001_027,ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
COL_001_028,"ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ."
COL_001_029,ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.
COL_002_001,"ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,"
COL_002_002,"ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ."
COL_002_003,ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.
COL_002_004,ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.
COL_002_005,ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.
COL_002_006,ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.
COL_002_007,"ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ."
COL_002_008,ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.
COL_002_009,"ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,"
COL_002_010,ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.
COL_002_011,ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.
COL_002_012,"ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ."
COL_002_013,ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
COL_002_014,ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.
COL_002_015,"ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು."
COL_002_016,"ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ."
COL_002_017,"ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ."
COL_002_018,"ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ."
COL_002_019,"ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ."
COL_002_020,"ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,"
COL_002_21-22,"“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ."
COL_002_023,"ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ."
COL_003_001,"ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ."
COL_003_002,"ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ."
COL_003_003,ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
COL_003_004,ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
COL_003_005,"ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ."
COL_003_006,ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
COL_003_007,ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.
COL_003_008,"ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ."
COL_003_009,"ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ."
COL_003_010,ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
COL_003_011,"ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ."
COL_003_012,"ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ."
COL_003_013,"ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ."
COL_003_014,ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
COL_003_015,ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
COL_003_016,"ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ."
COL_003_017,ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
COL_003_018,"ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ."
COL_003_019,"ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ."
COL_003_020,"ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ."
COL_003_021,"ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ."
COL_003_022,"ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ."
COL_003_023,ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.
COL_003_024,ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.
COL_003_025,ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.
COL_004_001,"ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ."
COL_004_002,"ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ."
COL_004_003,ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.
COL_004_004,ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.
COL_004_005,ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
COL_004_006,"ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ."
COL_004_007,"ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು."
COL_004_008,"ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,"
COL_004_009,ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
COL_004_010,ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
COL_004_011,"ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು."
COL_004_012,"ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ."
COL_004_013,"ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ."
COL_004_014,ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
COL_004_015,ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.
COL_004_016,ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.
COL_004_017,"ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ."
COL_004_018,ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.