Book_Chapter_Verse,Text 2PE_001_001,"ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ," 2PE_001_002,"ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ." 2PE_001_003,"ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು." 2PE_001_004,ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. 2PE_001_005,"ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ," 2PE_001_006,"ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ," 2PE_001_007,"ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ." 2PE_001_008,"ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ." 2PE_001_009,ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. 2PE_001_010,"ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ." 2PE_001_011,"ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು." 2PE_001_012,ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ನಿಮಗೆ ದೊರೆತಿರುವ ಸತ್ಯದಲ್ಲಿ ಸ್ಥಿರವಾಗಿದ್ದರೂ ಅವುಗಳನ್ನು ನಿಮಗೆ ನೆನಪಿಸಿಕೊಡುವುದಕ್ಕೆ ನಾನು ಯಾವಾಗಲೂ ಸಿದ್ಧವಾಗಿರುವೆನು. 2PE_001_013,ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ. 2PE_001_014,ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು. 2PE_001_015,ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು. 2PE_001_016,"ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು." 2PE_001_017,"ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ." 2PE_001_018,ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು. 2PE_001_019,ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. 2PE_001_020,ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. 2PE_001_021,ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು. 2PE_002_001,ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. 2PE_002_002,ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. 2PE_002_003,ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ. 2PE_002_004,ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. 2PE_002_005,ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. 2PE_002_006,ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. 2PE_002_007,ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. 2PE_002_008,ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. 2PE_002_009,ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ. 2PE_002_010,ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು. 2PE_002_011,"ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ." 2PE_002_012,ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. 2PE_002_013,"ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ." 2PE_002_014,"ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ." 2PE_002_015,ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು. 2PE_002_016,ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು. 2PE_002_017,"ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ." 2PE_002_018,ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. 2PE_002_019,ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. 2PE_002_020,ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. 2PE_002_021,ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು. 2PE_002_022,“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ. 2PE_003_001,"ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ." 2PE_003_002,ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ. 2PE_003_003,"ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ," 2PE_003_004,“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು. 2PE_003_005,ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ. 2PE_003_006,ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು. 2PE_003_007,ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ. 2PE_003_008,"ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ." 2PE_003_009,ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 2PE_003_010,ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು. 2PE_003_011,ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. 2PE_003_012,ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. 2PE_003_013,ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು. 2PE_003_014,"ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ." 2PE_003_015,ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. 2PE_003_016,"ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ." 2PE_003_017,"ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ." 2PE_003_018,ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.